ಪುತ್ತೂರಿನ ಸಂಪ್ಯದಲ್ಲಿ ಕಾರ್ಯಾಚರಿಸುತಿರುವ ಅಕ್ಷಯ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷ 2024-24ನೆ ಸಾಲಿಗೆ ದಾಖಲಾತಿಗೊಂಡ ವಿದ್ಯಾರ್ಥಿಗಳಿಗೆ ಒಂದು ದಿನದ “ದೃಷ್ಟಿ” ಮಾಹಿತಿ ಕಾರ್ಯಾಗಾರ ನಡೆಸಲಾಯಿತು.
ಕಾರ್ಯಾಗಾರದ ಸಭಾ ಕಾರ್ಯಕ್ರಮವನ್ನು ಕಾಲೇಜಿನ ಆಡಳಿತ ವ್ಯವಸ್ಥಾಪಕ ನಿರ್ದೇಶಕಿ ಶ್ರೀಮತಿ ಕಲಾವತಿ ಜಯಂತ ಉದ್ಘಾಟಿಸಿ ಅಕ್ಷಯ ಕಾಲೇಜನ್ನು ಆಯ್ಕೆ ಮಾಡಿರುವುದಕ್ಕೆ ಅಭಿನಂದನೆ ತಿಳಿಸಿ ವಿದ್ಯಾರ್ಥಿಗಳ ಭವಿಷ್ಯ ಸಧೃಡಗೊಳ್ಳಲು ಅಕ್ಷಯ ಕಾಲೇಜು ಎಂದಿಗೂ ಜೊತೆಯಲಿರಲಿದೆ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಅಧ್ಯಕ್ಷರಾದ ಶ್ರೀ ಜಯಂತ್ ನಡುಬೈಲ್ ಮಾತನಾಡಿ ಶಿಸ್ತಿನಿಂದ ಶಿಕ್ಷಣ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಈಗಿನಿಂದಲೇ ಅಳವಡಿಸಿಕೊಂಡು ಮುಂದಿನ ಭವಿಷ್ಯದಲ್ಲಿ ಯಶಸ್ಸು ಕಾಣಬೇಕು ಜೊತೆಗೆ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಬೇಕು ಕಾಲೇಜಿನ ೫ ವರ್ಷದ ಸಾಧನೆಯನ್ನು ಕೂಡ ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಡಾ ಟಿ ಕೃಷ್ಣಮೂರ್ತಿಯವರು ವಿದ್ಯಾರ್ಥಿಗಳಿಗೆ ಒಂದು ಗಂಟೆಯ ಉದ್ಯೋಗಾವಕಾಶಗಳ ಮಾಹಿತಿ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ನಡೆಸಿದರು.
ಗ್ರಂಥಪಾಲಕಿ ಶ್ರೀಮತಿ ಪ್ರಭಾವತಿ ಪ್ರಾರ್ಥಿಸಿ ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಕೆ ಪಕ್ಕಳ ಪ್ರಾಸ್ಥಾವಿಕದೊಂದಿಗೆ ಸ್ವಾಗತಿಸಿ ಆಡಳಿತಾಧಿಕಾರಿ ಅರ್ಪಿತ್ ಟಿ ಎ ವಂದಿಸಿ ಫ್ಯಾಷನ್ ಡಿಸೈನ್ ವಿಭಾಗದ ಮುಖ್ಯಸ್ಥರಾದ ಕಿಶನ್ ಎನ್ ರಾವ್ ಕಾರ್ಯಕ್ರಮ ನಿರೂಪಿಸಿದರು.