ಪುತ್ತೂರು: ದಿ.27/08/2024 ರಂದು ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನೆ ಇದರ ವತಿಯಿಂದ ಸಂಪ್ಯ ಅಂಗನವಾಡಿ ಕೇಂದ್ರದಲ್ಲಿ ಮುದ್ದು ಕೃಷ್ಣ ಸ್ಪರ್ಧೆಯನ್ನು ನಡೆಸಲಾಯಿತು.
ಅಂಗನವಾಡಿ ಶಿಕ್ಷಕಿ ಲೆರಿಶಾ ಡಿಸೋಜಾ ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮನ್ನು ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ರಕ್ಷಣ್ ಟಿ ಆರ್ ಶ್ರೀ ಕೃಷ್ಣ ಬಾಲ್ಯಲೀಲೆಯನ್ನು ಸಂಕ್ಷಿಪ್ತವಾಗಿ ತಿಳಿಸಿ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಬೆಳೆಸುವ ಜೊತೆಗೆ ಎಳವೆಯಲ್ಲಿಯೇ ಹಬ್ಬ ಹರಿದಿನಗಳ ಮಹತ್ವವನ್ನು ಆಚರಣೆಯ ಮೂಲಕ ಮನದಟ್ಟು ಮಾಡಬೇಕು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕಿಶೋರ್ ಕುಮಾರ್ ರೈ , ಸಹಯೋಜನಾಧಿಕಾರಿಗಳಾದ ಕು. ಮೇಘ ಮತ್ತು ಕು. ಸೌಜನ್ಯ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕ-ಸೇವಕಿಯರು ಪಾಲ್ಗೊಂಡಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಘಟಕ ನಾಯಕಿ ಕುಮಾರಿ ವರ್ಷಿಣಿ ಸ್ವಾಗತಿಸಿ , ಸ್ವಯಂಸೇವಕಿ ಕುಮಾರಿ ಶ್ರಾವ್ಯ ವಂದಿಸಿ ಮತ್ತು ಕುಮಾರಿ ವಿಂಧುಶ್ರೀ ನಿರೂಪಿಸಿದರು. ಸ್ಪರ್ಧೆಯಲ್ಲಿ ವಿಜೇತರಾದ ಪುಟಾಣಿ ಮಕ್ಕಳಿಗೆ ಬಹುಮಾನವನ್ನು ಮತ್ತು ಭಾಗವಹಿಸಿದ ಎಲ್ಲಾ ಪುಟಾಣಿ ಮಕ್ಕಳಿಗೂ ಪ್ರೋತ್ಸಾಹಕ ಬಹುಮಾನವನ್ನು ನೀಡಲಾಯಿತು. ಕಾರ್ಯಕ್ರಮಕ್ಕೆ ಪಾಲ್ಗೊಂಡ ಎಲ್ಲರಿಗೂ ಸಿಹಿ ತಿಂಡಿಯನ್ನು ವಿತರಿಸಲಾಯಿತು.
- Admission
- Eligibilty
- Sports/NSS Facilities
- Alumni
- Faculty