‘ಆಂತರ್ಯ 2.0’ ಐಟಿ ಫೆಸ್ಟ್‌ನಲ್ಲಿ ಅಕ್ಷಯ ಕಾಲೇಜು ವಿದ್ಯಾರ್ಥಿಗಳ ಸಾಧನೆ
ಪುತ್ತೂರು, ಏಪ್ರಿಲ್ 16: ನೆಹರೂನಗರದಲ್ಲಿರುವ ವಿವೇಕಾನಂದ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಎಂಸಿಎ ವಿಭಾಗದ ವತಿಯಿಂದ ಆಯೋಜಿಸಲಾದ ‘ಆಂತರ್ಯ 2.0’ ರಾಷ್ಟ್ರೀಯ ಮಟ್ಟದ ಕಾಲೇಜು ಐಟಿ ಉತ್ಸವದಲ್ಲಿ ಅಕ್ಷಯ ಕಾಲೇಜು, ಪುತ್ತೂರು ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಸ್ವೀಕರಿಸಿದರು.
ಇಂದು ನಡೆದ ವಿವಿಧ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ವಿಶೇಷವಾಗಿ ನೃತ್ಯ ಸ್ಪರ್ಧೆಯಲ್ಲಿ ದೇವಿಕಾ, ಮೋಕ್ಷ ಪಕಳಕುಂಜ, ದೀಕ್ಷಾ, ಸ್ವರ್ಣಶ್ರೀ, ತ್ರಿಷಾ, ದೀಕ್ಷಾ ಇವರ ತಂಡ ಅದ್ಭುತ ಪ್ರದರ್ಶನ ನೀಡಿ ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡರು.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ. ಈ ರೀತಿಯ ಉತ್ಸವಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವುದರೊಂದಿಗೆ, ಅವರ ಪ್ರತಿಭೆಯನ್ನು ಹೊರಹಾಕಲು ಉತ್ತಮ ವೇದಿಕೆಯಾಗಿವೆ ಎಂದು ಅಭಿಪ್ರಾಯಪಟ್ಟರು.