ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ರಕ್ಷಣಾ ಟಿ ಆರ್ ಅವರು ಮಾತನಾಡಿ ಕಾಲೇಜಿನಲ್ಲಿ ನಡೆಯುವ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಲು ಉತ್ತೇಜನ ನೀಡಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಕುಮಾರಿ ಮೇಘಶ್ರೀ ಪ್ರಾಸ್ತವಿಕ ಮಾತುಗಳನ್ನಾಡಿ “ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್” ನಲ್ಲಿ ನಡೆಯುವ ವಿವಿಧ ರೀತಿಯ ಸ್ಪರ್ಧೆಗಳ ಕುರಿತು ವಿವರಿಸಿದರು ಮತ್ತು ವಿದ್ಯಾರ್ಥಿಗಳು ತನ್ನನ್ನು ತಾನು ಸಕ್ರಿಯವಾಗಿ ಸ್ಪರ್ಧಾತ್ಮಕವಾಗಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸಿದರು.
ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀಮತಿ ದೀಪ್ತಿ ಉಪನ್ಯಾಸಕರು ಆಂಗ್ಲ ಭಾಷಾ ವಿಭಾಗ ಇವರು ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಮುಖ್ಯ ಅಂಶಗಳ ಕುರಿತು ವಿವರಿಸಿದರು.
ಹಾಗೆಯೇ ತಮ್ಮ ಮುಂದಿನ ವೃತ್ತಿ ಜೀವನದಲ್ಲಿ ಸಂವಹನ ಹಾಗೂ ಶಿಷ್ಟಾಚಾರಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶ್ರೀಮತಿ ರಶ್ಮಿ ಸಂಯೋಜಕಿ ಐಕ್ಯೂಎಸಿ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.ಈ ಕಾರ್ಯಕ್ರಮವನ್ನು ಕುಮಾರಿ ಶಹನ ಎಂ ಎಚ್ ಸ್ವಾಗತಿಸಿ, ಕುಮಾರಿ ರಶ್ಮಿ ವಂದಿಸಿ, ಜನನಿ ಡಿ ಜಿ ನಿರೂಪಿಸಿದರು.
ನ್ಯೂಸ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ :
ವೀಕ್ಷಕವಾಣಿ : https://veekshakavani.com/from-campus-to-career-worker-department-of-commerce-akshaya-college/