Anti Women Harassment Cell ಉದ್ಘಾಟನಾ ಕಾರ್ಯಕ್ರಮ

ಪುತ್ತೂರು: ಅಕ್ಷಯ ಎಜುಕೇಶನಲ್ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿAnti Women Harassment Cell ಮತ್ತು ಐಕ್ಯೂಎಸಿ ಇದರ ಆಶ್ರಯದಲ್ಲಿ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ ಮಾತನಾಡಿದ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆದ ಶ್ರೀಮತಿ ಭವಾನಿ ಇವರು, ಕಾಲೇಜಿನಲ್ಲಿ ಇಂತಹ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕೆಅಭಿನಂದಿಸುತ್ತ, ಮಹಿಳೆಯರಿಗೆಆಗುವಂತಹ ಕೌಟುಂಬಿಕ, ದೈಹಿಕ ಮತ್ತು ಮಾನಸಿಕ ಕಿರುಕುಳದ ಬಗ್ಗೆ ಜಾಗೃತಿ ಮೂಡಿಸಿದರು. ಈಗಿನ ಯುವ ಜನತೆಗೆಮಾರಕವಾಗಿರುವಂತಹಸೈಬರ್ ಅಪರಾಧ, ಮಾದಕ ದ್ರವ್ಯ ವ್ಯಸನ ಮತ್ತು ಸಂಚಾರಿ ನಿಯಮಗಳ ಬಗ್ಗೆ ಮನದಟ್ಟು ಮಾಡಿದರು.

ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂಪತ್ ಕೆ ಪಕ್ಕಳ, ಇಂತಹ ಕಾರ್ಯಕ್ರಮವನ್ನು ಆಯೋಜಿಸುವುದರಿಂದಕಾಲೇಜಿನಲ್ಲಿರುವವಿದ್ಯಾರ್ಥಿಗಳಿಗೂ ಹಾಗೂ ಸಿಬ್ಬಂದಿ ವರ್ಗದವರಿಗೂ ಸುರಕ್ಷಿತವಾದಪರಿಸರವನ್ನು ಕಲ್ಪಿಸುವಲ್ಲಿ ಸಹಾಯ ಮಾಡುತ್ತದೆ. ಇದನ್ನು ಉಳಿಸುವ ಜವಾಬ್ದಾರಿ ವಿದ್ಯಾರ್ಥಿಗಳ ಕೈಯಲ್ಲಿದೆ ಎಂದು ಮನವರಿಕೆ ಮಾಡಿದರು.

ಕುಮಾರಿ ನವಮಿ ತೃತೀಯ ಬಿಎಸ್ಸಿ ಫ್ಯಾಷನ್ ಡಿಸೈನ್ ಪ್ರಾರ್ಥನೆ ಹಾಡಿದರು. ಕುಮಾರಿ ಶ್ರಾವ್ಯ ಸ್ವಾಗತಿಸಿ, ಕುಮಾರಿ ಅಮಿತಾವಂದಿಸಿದರು. ಶ್ರೀಮತಿ ಕಾವ್ಯ ಮಲ್ಲಿಕಾರ್ಜುನ್ಪ್ರಸ್ತಾವಿಕವಾಗಿ ಮಾತನಾಡಿದರು.ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ರಶ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು.

 

Leave a Comment

Your email address will not be published. Required fields are marked *