ಅಕ್ಷಯ ಕಾಲೇಜಿನ ವಾಣಿಜ್ಯ ವಿಭಾಗದ “ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ “ಹಾಗೂ ಆಂತರಿಕ ಗುಣಮಟ್ಟದ ಭರವಸೆಕೋಶ ಸಹಯೋಗದಲ್ಲಿ ” FROM CAMPUS TO CAREER” ಕಾರ್ಯಗಾರ ನಡೆಯಿತು.
ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ರಕ್ಷಣಾ ಟಿ ಆರ್ ಅವರು ಮಾತನಾಡಿ ಕಾಲೇಜಿನಲ್ಲಿ ನಡೆಯುವ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಲು ಉತ್ತೇಜನ ನೀಡಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಕುಮಾರಿ ಮೇಘಶ್ರೀ ಪ್ರಾಸ್ತವಿಕ ಮಾತುಗಳನ್ನಾಡಿ “ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್” ನಲ್ಲಿ ನಡೆಯುವ ವಿವಿಧ ರೀತಿಯ ಸ್ಪರ್ಧೆಗಳ ಕುರಿತು ವಿವರಿಸಿದರು ಮತ್ತು ವಿದ್ಯಾರ್ಥಿಗಳು ತನ್ನನ್ನು ತಾನು ಸಕ್ರಿಯವಾಗಿ ಸ್ಪರ್ಧಾತ್ಮಕವಾಗಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸಿದರು. ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀಮತಿ ದೀಪ್ತಿ ಉಪನ್ಯಾಸಕರು ಆಂಗ್ಲ ಭಾಷಾ ವಿಭಾಗ ಇವರು …









