ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಂಟಿರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ “ಎಲೈಟ್” ಇಂಟಿರಿಯರ್ ಡಿಸೈನ್ ಸಂಘಟನೆ ಹಾಗೂ “ಭಾರತ್ ಅಕಾಡಮಿ ಆಫ್ ಲಿಬರಲ್ ಎಜುಕೇಷನ್” (BASE) ಜಂಟಿಯಾಗಿ ಆರಂಭಿಸಿದ “Auto Desk- 3DS Max & 3D Rendering” ಎಂಬ ವಿಷಯದಲ್ಲಿ ನಡೆದ ಕಾರ್ಯಾಗಾರದ ಭಾಗವಾಗಿ ನಡೆದ ಸಮಾರೋಪ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲ್ ಅವರು ಮಾತನಾಡಿ , ಕಾರ್ಯಾಗಾರಗಳು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ಯನ್ನು ನೀಡುವುದರ ಮೂಲಕ ವಿಷಯಗಳನ್ನು ಮನದಟ್ಟು ಮಾಡುವಲ್ಲಿ ಸಹಕಾರಿಯಾಗಿದೆ ಇದರ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. BASE ಅಕಾಡಮಿಯ ಸ್ಥಾಪಕ ನವೀನ್ ಗುರುರಾಜ್ ವಿದ್ಯಾರ್ಥಿಗಳಿಗೆ Auto Desk- 3DS Max & 3D Rendering” ನ ವಿಷಯದ ಬಗ್ಗೆ ಮಾರ್ಗದರ್ಶನ ನೀಡಿದರು. ಪ್ರಾಂಶುಪಾಲರಾದ ಸಂಪತ್ ಕೆ ಪಕ್ಕಳ ಮತ್ತು ಆಡಳಿತಾಧಿಕಾರಿ ಅರ್ಪಿತ್ ಟಿ ಎ ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ವೇದಿಕೆಯ ಗಣ್ಯರು ಪ್ರಮಾಣ ಪತ್ರ ವಿತರಿಸಿದರು.
ಇಂಟಿರಿಯರ್ ಡಿಸೈನ್ ವಿಭಾಗದ ಮುಖ್ಯಸ್ಥ ರಕ್ಷನ್ ಟಿ ಆರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಭಾರತ್ ಅಕಾಡಮಿ ಆಫ್ ಲಿಬರಲ್ ಎಜುಕೇಷನ್ ಸಂಸ್ಥೆಯ ನಿರ್ವಾಹಕಿ ಸುಧಾ ಜಯರಾಮ್ ಮತ್ತು ತರಬೇತುದಾರೆ ದೀಪ್ತಿ ಉಪಸ್ಥಿತರಿದ್ದರು.
ಇಂಟಿರಿಯರ್ ಡಿಸೈನ್ ವಿಭಾಗದ ಸಹಪ್ರಾಧ್ಯಾಪಕಿಯಾರಾದ ಶ್ರೀಮತಿ ಕಾವ್ಯ ಹಾಗೂ ಶ್ರದ್ಧಾ ಕಾರ್ಯಕ್ರಮವನ್ನು ನಿರೂಪಿಸಿದರು.