ಅಕ್ಷಯ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ
ದಿನಾಂಕ 26.07.2025 ರಂದು ಅಕ್ಷಯ ಕಾಲೇಜು ಪುತ್ತೂರಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಕಾರ್ಗಿಲ್ ವಿಜಯ ದಿವಸ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಎಲ್ಲಾ ಅತಿಥಿಗಳು ಭಾರತ ಮಾತೆಯ ಭಾವಚಿತ್ರಕ್ಕೆ ಗೌರವ ಪುಷ್ಪಾರ್ಚನೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸಂಪತ್ ಪಕ್ಕಳ ಪ್ರಾಂಶುಪಾಲರು, ಅಕ್ಷಯ ಕಾಲೇಜು ಪುತ್ತೂರು ಇವರು ವಹಿಸಿ ತಮ್ಮ ಪ್ರೇರಣಾದಾಯಕ ಭಾಷಣದಲ್ಲಿ ದೇಶ ಸೇವೆ ಹಾಗೂ ಯೋಧರ ಬಲಿದಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ …









