ಅಕ್ಷಯ ಕಾಲೇಜು ಎನ್‌ಎಸ್‌ಎಸ್ ಶಿಬಿರ ಸಂಪನ್ನ
ಅಕ್ಷಯ ಕಾಲೇಜಿನ ರಾ.ಸೇ.ಯೋ.ಘಟಕಗಳ ವಾರ್ಷಿಕ ವಿಷೇಶ ಶಿಬಿರವು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಮೇಗಿನಪೇಟೆಯಲ್ಲಿ ಯಶಸ್ವಿಯಾಗಿ ನಡೆಯಿತು. ಶಿಬಿರದಲ್ಲಿ ಸ್ವಚ್ಛತಾ ಅಭಿಯಾನ, ಗಿಡ ನೆಡುವ ಕಾರ್ಯಕ್ರಮ ಮತ್ತು ಆರೋಗ್ಯ ಜಾಗೃತಿ ಸೇರಿದಂತೆ ಹಲವು ಸಮಾಜಮುಖಿ ಚಟುವಟಿಕೆಗಳು ನಡೆದವು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಅಧ್ಯಕ್ಷರು ಜಯಂತ ನಡುಬೈಲು ಮಾತನಾಡಿ ನಮ್ಮ ವಿದ್ಯಾರ್ಥಿಗಳು ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಅವರು ಜವಾಬ್ದಾರಿಯುತ ನಾಗರಿಕರಾಗಲು ಸಿದ್ಧಗೊಳ್ಳುತ್ತಾರೆ. ಶಿಬಿರದಲ್ಲಿ ಕಲಿತ ಪಾಠಗಳು ಮುಂದಿನ ಜೀವನದಲ್ಲಿಯೂ ಪ್ರೇರಣೆಯಾಗಿ ಉಳಿಯಬೇಕು, ಎಲ್ಲಾ ವಿದ್ಯಾರ್ಥಿಗಳು ಈ …









