Diksuchi 2 - Belthangady
ಅಕ್ಷಯ ಕಾಲೇಜು ಪುತ್ತೂರು ಇದರ ವತಿಯಿಂದ ದಿಕ್ಕೂಚಿ-II ಕಾರ್ಯಕ್ರಮವನ್ನು ದಿನಾಂಕ 02/05/2023 ರಂದು ಬೆಳ್ತಂಗಡಿಯಲ್ಲಿ ನಡೆಸಲಾಯಿತು, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ಸೌಲಭ್ಯದ, ವಿದ್ಯಾರ್ಥಿ ವೇತನ, ವೃತ್ತಿಪರ ಕೋರ್ಸ್ ಗಳ ಕುರಿತು ನುರಿತ ತಜ್ಞರಿಂದ ಮಾಹಿತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟಕರಾಗಿ ಸುಮಂತ್ ಕುಮಾರ್ ಜೈನ್ ಅಧ್ಯಕ್ಷರು, ಎಕ್ಸೆಲ್ ಕಾಲೇಜು ಹಾಗೂ ಮುಖ್ಯ ಅತಿಥಿಗಳಾಗಿ ಯದುಪತಿ ಗೌಡ, ಪ್ರಾಂಶುಪಾಲರು ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಹಾಗೂ ಸುಕೇಶ್ ಕುಮಾರ್ ಕೆ, ಪ್ರಾಂಶುಪಾಲರು ಗುರುದೇವ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಮಾತನಾಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಹಾಗೂ ಗೌರವ ಅಥಿತಿಯಾಗಿ ಶ್ರೀ ವಿಜಯ ರಾಘವೇಂದ್ರ, ಕನ್ನಡ ಚಲನಚಿತ್ರ ನಟ ಇವರು ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲು, ಪ್ರಾಂಶುಪಾಲರಾದ ಸಂಪತ್ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

