ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ
ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು
ಐಕ್ಯೂಎಸಿ ಇದರ ಆಶ್ರಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಶ್ರೀಮತಿ ರಾಜರತ್ನ ಕೆ ಎ, ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಿ ವಿದ್ಯಾರ್ಥಿಗಳಿಗೆ ಜೀವನ ಮೌಲ್ಯಗಳನ್ನು ಹೇಳಿಕೊಡುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಠಲ ಪದವಿ ಪೂರ್ವ ಕಾಲೇಜು, ವಿಟ್ಲ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಶ್ರೀ ಅಣ್ಣಪ್ಪ ಸಾಸ್ತಾನ ಭಿತ್ತಿ ಪತ್ರ ಅನಾವರಣಗೊಳಿಸಿ, ಸೇವೆ,ಶಿಕ್ಷಣ , ಹಾಗು ವ್ಯಕ್ತಿತ್ವ ನಿರ್ಮಾಣಕ್ಕೆ ರಾಷ್ಟ್ರೀಯ ಸೇವಾ ಯೋಜನೆ ಅತೀ ದೊಡ್ಡ ವೇದಿಕೆಯಾಗಿ ವಿದ್ಯಾರ್ಥಿಗಳನ್ನು ಅಭಿವೃದ್ದಿ ಪಥದತ್ತ ಕೊಂಡಯ್ಯುತ್ತದೆ ಎಂದರು.

ಅಧ್ಯಕ್ಷ ನೆಲೆಯಲ್ಲಿ ಮಾತನಾಡಿದ ಕಾಲೇಜಿನ ಅಧ್ಯಕ್ಷರಾದ ಶ್ರೀಯುತ ಜಯಂತ ನಡುಬೈಲು, ವಿದ್ಯಾರ್ಥಿಗಳಲ್ಲಿ ಸಮಾನತೆಯ ಭಾವನೆಯನ್ನು
ಮೂಡಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಬಹಳ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕಿ ಶ್ರೀಮತಿ ಕಲಾವತಿ ಜಯಂತ್, ಪ್ರಾಂಶುಪಾಲ ಶ್ರೀ ಸಂಪತ್ ಪಕ್ಕಳ, ಆಡಳಿತಾಧಿಕಾರಿ ಶ್ರೀ ಅರ್ಪಿತ್ ಟಿ ಎ
ಉಪಸ್ಥಿತರಿದ್ದರು.
2022-23 ನೇ ಸಾಲಿನ ಉತ್ತಮ ಎನ್.ಎಸ್ ಎಸ್ ನಾಯಕಿ ಪ್ರಶಸ್ತಿಗೆ ಕುಮಾರಿ ಪ್ರಣಮ್ಯ ಅಗಳಿ ಭಾಜನರಾದರು. ಎನ್ಎಸ್ಎಸ್ ಶಿಬಿರದಲ್ಲಿ ಭಾಗವಹಿಸಿದ
ಎಲ್ಲಾ ಸ್ವಯಂಸೇವಕರಿಗೆ ಪ್ರಮಾಣ ಪತ್ರ ನೀಡಿ ಅಭಿನಂದಿಸಲಾಯಿತು.
ಕುಮಾರಿ ಪ್ರಕೃತಿ ಪ್ರಾರ್ಥನೆ ಹಾಡಿದರು. ರಾಷ್ಟ್ರೀಯ ಸೇವಾ ಯೋಜನಾ ಕಾರ್ಯಕ್ರಮ ಅಧಿಕಾರಿ ಶ್ರೀ ಕಿಶೋರ್ ಕುಮಾರ್ ರೈ ಕೆ ಪ್ರಾಸ್ತಾವಿಕ ಮಾತನಾಡಿದರು.
ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕಿ ನವಮಿ ಸ್ವಾಗತಿಸಿ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕ ಜೀವನ್ ವಂದಿಸಿದರು. ಕುಮಾರಿ
ವಿದ್ಯಾಶ್ರೀ ಕಾರ್ಯಕ್ರಮ ನಿರೂಪಿಸಿದರು.