- Admission
- Eligibilty
- Sports/NSS Facilities
- Alumni
- Faculty
ಅಕ್ಷಯ ಕಾಲೇಜಿನ 2023-24ನೇ ಸಾಲಿನ ವಿದ್ಯಾರ್ಥಿ ಸಂಘ ಉದ್ಘಾಟನೆ
ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಐಕ್ಯೂಎಸಿ ಇದರ ಆಶ್ರಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿದ ರಾಮಚಂದ್ರ ಪಿಯು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಶೇಖರ್ ರೈ ಕೆ ಇವರು ನಿಜವಾದ ನಾಯಕ, ಅವನ ಗುಣಗಳು ಇದರ ಬಗ್ಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿಸಿ, ಹುಟ್ಟುತ್ತಾ ಯಾರೂ ನಾಯಕನಾಗುವುದಿಲ್ಲ, ಪರಿಸ್ಥಿತಿ ಅವನನ್ನು ನಾಯಕನನ್ನಾಗಿ ಮಾಡುತ್ತದೆ. ಪರಿಸ್ಥಿತಿಯನ್ನು ಅರ್ಥೈಸಿಕೊಂಡು ನಡೆದರೆ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು ತಿಳಿಸಿದರು. ಅಧ್ಯಕ್ಷ ನೆಲೆಯಲ್ಲಿ ಮಾತನಾಡಿದ ಶ್ರೀಯುತ ಜಯಂತ ನಡುಬೈಲು ವಿದ್ಯಾರ್ಥಿ ಸಂಘದ ಎಲ್ಲಾ ಪದಾಧಿಕಾರಿಗಳಿಗೆ ಶುಭ ಹಾರೈಸಿ ಶೈಕ್ಷಣಿಕ ಸಾಲಿನಲ್ಲಿ ಉತ್ತಮ ಕೆಲಸಗಳು ಅವರಿಂದ ನಡೆಯಲಿ ಎಂದರು. ವೇದಿಕೆಯಲ್ಲಿ ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕಿ ಶ್ರೀಮತಿ ಕಲಾವತಿ ಜಯಂತ್, ಪ್ರಾಂಶುಪಾಲ ಶ್ರೀ ಸಂಪತ್ ಪಕ್ಕಳ, ಆಡಳಿತಾಧಿಕಾರಿ ಶ್ರೀ ಅರ್ಪಿತ್ ಟಿ ಎ ಉಪಸ್ಥಿತರಿದ್ದರು. ಪ್ರಾರ್ಥನೆ ಶ್ರದ್ಧ ಮತ್ತು ಬಳಗದಿಂದ ನಡೆಯಿತು. ವಿದ್ಯಾರ್ಥಿನಿ ಕುಮಾರಿ ಕೃತಿ ಕೆ ಸ್ವಾಗತಿಸಿ, ವಿನೋದ್ ಕೆಸಿ ವಂದಿಸಿದರು. ಕುಮಾರಿ ದಕ್ಷಿತ ಎಮ್ ಕೆ ಕಾರ್ಯಕ್ರಮ ನಿರೂಪಿಸಿದರು.