- Admission
- Eligibilty
- Sports/NSS Facilities
- Alumni
- Faculty
ಅಕ್ಷಯ ಕಾಲೇಜಿನಲ್ಲಿ FACERA ಫ್ಯಾಷನ್ ಡಿಸೈನ್ ಅಸೋಸಿಯೇಷನ್ ಆಯೋಜಿಸಿದ್ದ vanzova facito ಸೀಸನ್- 2 ಫ್ಯಾಷನ್ ಶೋ
ಪುತ್ತೂರು: ಅಕ್ಷಯ ಕಾಲೇಜಿನಲ್ಲಿ FACERA ಫ್ಯಾಷನ್ ಡಿಸೈನ್ ಅಸೋಸಿಯೇಷನ್ ಆಯೋಜಿಸಿದ್ದ vanzova facito ಸೀಸನ್- 2 ಫ್ಯಾಷನ್ ಶೋ ವನ್ನು ಅಕ್ಷಯ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟಕರಾಗಿ ಶ್ರೀಮತಿ ವಂದನಾ ಕೃಷ್ಣ, ವಾಣಿಜ್ಯೋದ್ಯಮಿ ಹಾಗೂ ಮಾಲೀಕರು ಲಲಿತ್ಯ ಫ್ಯಾಷನ್ ಸ್ಟುಡಿಯೋ, ಉಡುಪಿ ಇವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮ ವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕಿ ಶ್ರೀಮತಿ ಕಲಾವತಿ ಜಯಂತ್ ನಡುಬೈಲ್ ಅವರು ಮಾತನಾಡಿ ವಿದ್ಯಾರ್ಥಿಗಳು ಕಾರ್ಯಕ್ರಮವನ್ನೂ ಸದುಪಯೋಗ ಪಡಿಸಿಕೊಂಡು ಒಳ್ಳೆಯ ವಿದ್ಯಾರ್ಥಿಗಳಾಗಿ ಬಾಳಿ ಎಂದು ಶುಭ ಹಾರೈಸಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಕೆ ಪಕ್ಕಳ, ಫ್ಯಾಷನ್ ಡಿಸೈನ್ ವಿಭಾಗ ದ ಮುಖ್ಯಸ್ಥರಾದ ಕಿಶನ್ ನ್ ರಾವ್, ಅಸೋಸಿಯೇಷನ್ ನ ಸಂಯೋಜಕರಾದ ಉಪನ್ಯಾಸಕಿ ದೀಪ್ತಿ ಹಾಗೂ ಮತ್ತಿತರು ಉಪಸ್ಥಿತರಿದ್ದರು.
ಅಸೋಸಿಯೇಷನ್ ನ ಅಧ್ಯಕ್ಷೆ ವಿದ್ಯಾಶ್ರೀ ಸ್ವಾಗತಿಸಿ, ಫ್ಯಾಷನ್ ಡಿಸೈನ್ ವಿಭಾಗದ ಮುಖ್ಯಸ್ಥ ರಾದ ಕಿಶನ್ ನ್ ರಾವ್ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯದರ್ಶಿ ಶ್ರದ್ಧಾ ವಂದಿಸಿ, ದಕ್ಷಿತ ಇವರು ಕಾರ್ಯಕ್ರಮವನ್ನೂ ನಿರೂಪಿಸಿದರು.