- Admission
- Eligibilty
- Sports/NSS Facilities
- Alumni
- Faculty
Vivekananda Jayanti Celebration

ಪುತ್ತೂರು ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತಿರುವ ಸಂಪ್ಯ ಕಾಲೇಜಿನಲ್ಲಿ ರಾಷ್ಟೀಯ ಸೇವಾ ಯೋಜನಾ ಕಾರ್ಯಕ್ರಮದಡಿಯಲ್ಲಿ ರಾಷ್ಟೀಯ ಯುವದಿನಾಚರಣೆ ಕಾರ್ಯಕ್ರಮ ನಡೆಯಿತು.ಕಾಲೇಜಿನ ಆಡಳಿತ ವ್ಯವಸ್ಥಾಪಕಿ ಕಲಾವತಿ ನಡುಬೈಲು ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಸೈಂಟ್ ಫಿಲೋಮಿನಾ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ದಿನಕರ್ ಅಂಚನ್ ಮಾತನಾಡಿ, ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಅಕ್ಷಯ ಕಾಲೇಜಿನ ಪ್ರಾಂಶುಪಾಲರು ಸಂಪತ್ ಪಕ್ಕಳ, ವಿದ್ಯಾರ್ಥಿಗಳು ಎನ್ ಎಸ್ ಎಸ್ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಚಟುವಟಿಕೆಯಿಂದಿರಲು ಸಾಧ್ಯ ಎಂದು ಹೇಳಿದರು.


Previous image
Next image
ಎನ್ ಎಸ್ ಎಸ್ ವಿದ್ಯಾರ್ಥಿ ನಾಯಕರಾದ ಹಸ್ತಿಕ್ ಹಾಗೂ ವಿದ್ಯಾಶ್ರೀ ಉಪಸ್ಥಿತರಿದ್ದರು. ಕಾಲೇಜಿನ ಎನ್ ಎಸ್ ಎಸ್ ಯೋಜನಾಧಿಕಾರಿ ಕಿಶೋರ್ ಕುಮಾರ್ ರೈ ಕೆ ಸ್ವಾಗತಿಸಿದರು. ವಿದ್ಯಾರ್ಥಿ ಹಸ್ತಿಕ್ ವಂದಿಸಿದರು. ವಿದ್ಯಾರ್ಥಿ ತಿಲಕ್ ರಾಜ್ ಕಾರ್ಯಕ್ರಮ ನಿರ್ವಹಿಸಿದರು.